Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ: ವೃದ್ಧೆಯ ಹ*ತ್ಯೆ ಮತ್ತು ಚಿನ್ನಾಭರಣ ಸುಲಿಗೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಮಹತ್ವದ ಆದೇಶ!

Spread the love

ಬಂಟ್ವಾಳ : ಆರೈಕೆ ನೋಡಿಕೊಳ್ಳುತ್ತಿದ್ದ 73 ವರ್ಷದ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಸುಲಿಗೆ ಮಾಡಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜುಲೈ 28) ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಕೊಲೆಯಾದ ವೃದ್ಧೆ. ಬಂಟ್ವಾಳ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23) ಎಂಬಾಕೆ ವೃದ್ಧೆಯ ಆರೈಕೆ ನೋಡಿಕೊಳ್ಳುತ್ತಿದ್ದಳು. ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿಟ್ಟಿದ್ದ ಈಕೆ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ಮೊದಲು ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಳು. ಆದರೆ ಅದು ಸಫಲವಾಗದಿದ್ದಾಗ, ಮತ್ತೊಬ್ಬ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನನ್ನು ಸೇರಿಸಿಕೊಂಡು 2021ರ ಜನವರಿ 25ರಂದು ರಾತ್ರಿ ವೃದ್ಧೆ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆ ಮಾಡಿದ್ದರು.

ಹತ್ಯೆಯ ನಂತರ ವೃದ್ಧೆಯ ಬಳಿಯಿದ್ದ ₹3 ಲಕ್ಷ ಮೌಲ್ಯದ 61.070 ಗ್ರಾಂ ತೂಕದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ್ದರು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (ಅ.ಕ್ರ 22/2021) ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಆರೋಪಿಗಳನ್ನು ಬಂಧಿಸಿದ್ದು, ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀ ಜಗದೀಶ್ ವಿ.ಎನ್. ಅವರು, ಐಪಿಸಿ ಕಲಂ 302, 392, 120 (ಬಿ), 201 ಹಾಗೂ 34 ರಡಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ಪ್ರಮೋದ್ ನಾಯಕ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *