Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯ: ಟೆಂಡರ್ ಕರೆದ ಸಚಿವ ಜಮೀರ್ ಅಹ್ಮದ್

Spread the love

ಬೆಳಗಾವಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ (Minority Department) ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ (Hostel) ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ತಿಳಿಸಿದ್ದಾರೆ.

ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನೆಗೆ ಉತ್ತರ ನೀಡಿದ ಅವರು, ಇಲಾಖೆಯ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೃಂದ ಮತ್ತು ನೇಮಕಾತಿ ನಿಯಮಗಳು 2011ರ ಸಮಗ್ರ ಪರಿಷ್ಕರಣೆಯ ಪುಸ್ತಾವನೆಯು ಪರಿಶೀಲನೆಯಲ್ಲಿದೆ. ಈ ನಿಯಮಗಳು ಪರಿಷ್ಕರಣೆ ಆದ ನಂತರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು

ಪ್ರಸ್ತುತ ವಿದ್ಯಾರ್ಥಿ ನಿಲಯಗಳ ಸುಗಮ ಕಾರ್ಯನಿರ್ವಹಣೆಗಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರದ ವ್ಯವ್ಯಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿರುತ್ತದೆ ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *