ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತ ಬಿಬಿಎಂಪಿ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.