Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನಕ್ಕೆ ತಡೆ – 15 ಗೋವುಗಳು ವಶಕ್ಕೆ

Spread the love

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಲಪಂಥೀಯ ಸಂಘಟನೆಯ ಸದಸ್ಯರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.

ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ವಾಹನ ಮತ್ತು 15 ಕ್ಕೂ ಹೆಚ್ಚು ಜಾನುವಾರುಗಳನ್ನು ವಶಕ್ಕೆ ಪಡೆದರು.


Spread the love
Share:

administrator

Leave a Reply

Your email address will not be published. Required fields are marked *