Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು!

Spread the love

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಸುಲ್ಕೇರಿ ಗ್ರಾಮದ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅತ್ಯಂತ ವೇಗವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಭೀಕರತೆಗೆ ಕಾಂಕ್ರೀಟ್‌ನ ವಿದ್ಯುತ್ ಕಂಬವು ತಳಭಾಗದಿಂದಲೇ ಮುರಿದು ಕಾರಿನ ಮುಂಭಾಗದ ಮೇಲೆಯೇ ಬಿದ್ದಿದೆ. ಪರಿಣಾಮವಾಗಿ ಕಾರಿನ ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗದ ಸ್ಥಿತಿಯನ್ನು ನೋಡಿದರೆ ಒಳಗಿದ್ದವರು ಬದುಕುಳಿದಿದ್ದೇ ದೊಡ್ಡ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *