Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಟೆಂಪೋ ಹಾಗೂ ಸ್ಕೂಟರ್‌ಗಳ ನಡುವೆ ಭೀಕರ ಸರಣಿ ಅಪಘಾತ – ಇಬ್ಬರು ಸವಾರರು ದಾರುಣ ಸಾ*ವು!

Spread the love

ಬೆಳ್ತಂಗಡಿ : ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸವಾರರು ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಬುಧವಾರ ನಡೆದಿದೆ. ನಾವೂರು ನಿವಾಸಿ ಸಂತೋಷ್ (32) ಹಾಗೂ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಮೃತಪಟ್ಟ ದ್ವಿಚಕ್ರ ವಾಹನಗಳ ಸವಾರರು

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಚಲಿಸುತ್ತಿದ್ದ ಟಾಟಾ ಗೂಡ್ಸ್ ವಾಹನವು ಎದುರಿನಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಢಿಕ್ಕಿ ಹೊಡೆದಿದೆ. ಗೂಡ್ಸ್ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿದ್ದುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಕೂಟರ್ ಸವಾರರಾಗಿದ್ದ ಸಂತೋಷ್ ಅವರು ಮಂಗಳೂರಿನ ಸುವರ್ಣ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಸಂತೋಷ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬೈಕ್ ಸವಾರ ಮೋಹನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *