Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾ*ವು, ಸಹಸವಾರ ಗಂಭೀರ!

Spread the love

ಬೆಳ್ತಂಗಡಿ: ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ನೀರಚಿಲುಮೆ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ (ಆಗಸ್ಟ್ 11) ಬೆಳಿಗ್ಗೆ ಸಂಭವಿಸಿದೆ. ಮಡಂತ್ಯಾರು ಸಮೀಪದ ಪಾರೆಂಕಿ ಪಂಗಳ ನಿವಾಸಿ ಸೋಮನಾಥ (27) ಮೃತ ದುರ್ದೈವಿ. ಬೈಕ್‌ನಲ್ಲಿದ್ದ ಸಹಸವಾರ ಬಳ್ಳಮಂಜ ನಿವಾಸಿ ಭರತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾರೆ ಕೆಲಸದವರಾದ ಸೋಮನಾಥ ಹಾಗೂ ಭರತ್ ಅವರು ಬೆಳಿಗ್ಗೆ ಬೈಕ್‌ನಲ್ಲಿ ಧರ್ಮಸ್ಥಳಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎದುರಿನಿಂದ ಬಂದ ಬೈಕ್ ನಡುವೆ ನೀರಚಿಲುಮೆಯ ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೋಮನಾಥ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಸಹಸವಾರ ಭರತ್ ಅವರಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *