Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿ: ಪಿಗ್ಮಿ ಸಂಗ್ರಹಕಾರನಾಗಿದ್ದ ಯುವಕ ಆತ್ಮಹ*ತ್ಯೆ – ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಬಳಿ ದುರಂತ!

Spread the love

ಬೆಳ್ತಂಗಡಿ: ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಬಾಳೆಹಿತ್ತಿಲು ನಿವಾಸಿ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಗಿಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದರು.
ಕೆಲಸಕ್ಕೆ ರಜೆ ಹಾಕಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತಮ್ಮ ಸಂಬಂಧಿಕರು ಮತ್ತು ಸಹೋದರರೊಂದಿಗೆ ಉತ್ಸಾಹದಿಂದ ಇದ್ದ ಪುನೀತ್, ಬುಧವಾರ ರಾತ್ರಿ 9:30ರ ಸುಮಾರಿಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ,
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಸ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *