Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಗಾಳ ಚುನಾವಣೆ: ಶೇ. 23ರಷ್ಟು ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್

Spread the love

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಗಣನೀಯ ಸಂಖ್ಯೆಯ ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿರುವುದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹಾಗೂ ಪಶ್ಚಿಮ ಬಂಗಾಳ ಚುನಾವಣಾ ಕಾವಲು ಸಂಸ್ಥೆಗಳ ವರದಿಯಿಂದ ಬೆಳಕಿಗೆ ಬಂದಿದೆ.
ಒಟ್ಟು 1,475 ಅಭ್ಯರ್ಥಿಗಳಲ್ಲಿ 294 ಮಂದಿ ತಮ್ಮ ಅಫಿಡವಿಟ್ ಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳನ್ನು ಘೋಷಿಸಿಕೊಂಡಿದ್ದು ಪ್ರತಿ ಐದು ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಇಂತಹ ಆರೋಪಗಳಿರುವುದು ಕಂಡುಬಂದಿದೆ. 345 ಅಭ್ಯರ್ಥಿಗಳು (ಸುಮಾರು 23%) ಕ್ರಿಮಿನಲ್ ಪ್ರಕರಣಗಳಿರುವುದಾಗಿ ಸ್ವಯಂ ಪ್ರಮಾಣ ಮಾಡಿದ್ದಾರೆ.
ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ 98 ಅಭ್ಯರ್ಥಿಗಳ ವಿರುದ್ಧ ಪ್ರಕರಣಗಳು ದಾಖಲಾಗಿರುವುದು ವರದಿ ಉಲ್ಲೇಖಿಸಿದೆ. ಇದರ ನಡುವೆಯೇ ಚುನಾವಣಾ ಕಣದಲ್ಲಿರುವ ಮಹಿಳಾ ಅಭ್ಯರ್ಥಿಗಳ ಪ್ರಮಾಣ ಕೇವಲ 11% ಮಾತ್ರ ಎಂದು ಗಮನ ಸೆಳೆಯುತ್ತದೆ.
ಎಡಿಆರ್ ಪ್ರಕಾರ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಶಿಕ್ಷೆಗೆ ಒಳಪಡುವ ಅಪರಾಧಗಳು, ಜಾಮೀನು ರಹಿತ ಪ್ರಕರಣಗಳು, ಚುನಾವಣಾ ಅಪರಾಧಗಳು, ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ‘ಗಂಭೀರ ಕ್ರಿಮಿನಲ್ ಪ್ರಕರಣಗಳು’ ಎಂದು ಪರಿಗಣಿಸಲಾಗುತ್ತದೆ.
ಚುನಾವಣಾ ರಾಜಕಾರಣದಲ್ಲಿ ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳ ಹೆಚ್ಚುತ್ತಿರುವ ಪ್ರಮಾಣದ ಬಗ್ಗೆ ಈ ವರದಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *