Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಆರೋಪಿ ಬಂಧನ

Spread the love

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ.ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ, ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ.

ಅಲ್ಲದೇ ಜೂನ್ 7ರಂದು ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕ ಬಿಲ್​ ಪಾವತಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಟೆಕ್ಸ್ ಟೈಲ್ಸ್ ಉದ್ಯಮಿಯೊಬ್ಬರ ಮಗನಾಗಿರುವ ಕ್ರಿಷ್ ಮಾಲಿ, ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಆನ್‌ಲೈನ್‌ ಮೂಲಕ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದ. ತನ್ನ ಬಳಿಯಿರುವ ಹಣ ಎಷ್ಟು ದಿನಗಳ ಕಾಲ ಸಾಲಬಹುದು ಎಂದು ಯೋಚಿಸಿದ್ದ ಆರೋಪಿ, ಅದಕ್ಕಾಗಿ ತಾನೇ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಲು ಯೋಚಿಸಿದ್ದ.ಬ್ಯಾಗ್‌ನಲ್ಲಿ ಪ್ರಿಂಟರ್, ಸ್ಕ್ಯಾನರ್‌ಗಳನ್ನು ತಂದಿದ್ದ ಆರೋಪಿ ಹೋಟೆಲ್‌ನಲ್ಲಿ ಕುಳಿತೇ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿದ್ದ.


Spread the love
Share:

administrator

Leave a Reply

Your email address will not be published. Required fields are marked *