Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ದಿಢೀರ್ ರಾಜೀನಾಮೆ; ಡಿಕೆಶಿ ಸಂಪುಟಕ್ಕೆ ಎಂಟ್ರಿ!

Spread the love

ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ.

ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ಗೆ ಯು.ಟಿ. ಖಾದರ್​​ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್​​ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್​​ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.

ಇನ್ನು ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸಿರುವ ಯು.ಟಿ. ಖಾದರ್​​, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಒಳಿತೆಂಬ ಬಯಕೆ ಇದೆ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿಭಾಯಿಸಲು ತಾನು ಸಿದ್ಧ. ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಯು.ಟಿ. ಖಾದರ್ ಸಚಿವರಾಗುವುದು ಖಚಿತವಾಗಿರುವ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆದಿದೆ. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಬಳಿ ಇರುವ ಖಾದರ್​ ನಿವಾಸಕ್ಕೆ ಆಗಮಿಸಿ ಹಲವರು ಶುಭ ಕೋರುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *