ಬೆಂಗಳೂರಲ್ಲಿ ಪುಂಡರ ಅಟ್ಟಹಾಸ: ಲಾಂಗ್ ಬೀಸಿ 20 ವಾಹನಗಳ ಗ್ಲಾಸ್ ಪುಡಿಗಟ್ಟಿದ ಭಯಾನಕ ದೃಶ್ಯ ವೈರಲ್!

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಮುಂದುವರಿದಿದ್ದು, ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಲಾಂಗ್ ಬೀಸಿ 20 ವಾಹನಗಳ ಗ್ಲಾಸ್ ಪುಡಿಗಟ್ಟಿದ್ದಾರೆ. ಸ್ತೆ ಬದಿ ಪಾರ್ಕ್ ಮಾಡಿದ್ದ ವಾಹನಗಳ ಮೇಲೆ ಎರ್ರಾಬಿರ್ರಿ ಲಾಂಗ್ ಬೀಸಿದ್ದಾರೆ. ಅಷ್ಟೇ ಅಲ್ಲದೆ, ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿ ಐದಾರು ವಾಹನಗಳ ಗ್ಲಾಸ್ಗಳನ್ನು ಒಡೆದುಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದೆ.
