Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ: 262 ಕಿ.ಮೀ ಯೋಜನೆ 3 ಗಂಟೆ ಪ್ರಯಾಣದೊಂದಿಗೆ 2025–26ರಲ್ಲಿ ಲೋಕಾರ್ಪಣೆ

Spread the love

ಬೆಂಗಳೂರು-ಹೈದರಾಬಾದ್ (512 ಕಿ.ಮೀ) ಮತ್ತು ಬೆಂಗಳೂರು-ಪುಣೆ (700 ಕಿ.ಮೀ) ಎಕ್ಸ್‌ಪ್ರೆಸ್‌ವೇಗಳಿಗೆ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಸಲ್ಲಿಸಲಾಗಿದೆ ಎಂಬುದನ್ನೂ ಕೇಂದ್ರ ಸಚಿವರು ತಿಳಿಸಿದ್ದಾರೆ. ಹೊಸ ಎಕ್ಸ್‌ಪ್ರೆಸ್‌ವೇ ಜಾಲವು ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗಳು, ರಸ್ತೆಬದಿಯ ಸೌಲಭ್ಯಗಳು ಮತ್ತು ಯುಟಿಲಿಟಿ ಕಾರಿಡಾರ್‌ಗಳನ್ನು ಹೊಂದಿರುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣವೇನು?

ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣಗಳನ್ನು ತಿಳಿಸಿದ ಅವರು, ಭೂಸ್ವಾಧೀನಕ್ಕೆ ವಿರೋಧ, ಪರಿಹಾರ ವಿತರಣೆಯಲ್ಲಿ ನಿಧಾನಗತಿ ಮತ್ತು ಧಾರ್ಮಿಕ ಕಟ್ಟಡಗಳನ್ನು ಸ್ಥಳಾಂತರಿಸುವಲ್ಲಿನ ತೊಂದರೆಗಳು ಕಾಮಗಾರಿ ವಿಳಂಬಕ್ಕೆ ಕಾರಣವಾಗಿವೆ ಎಂದು ಹೆದ್ದಾರಿ ಸಚಿವಾಲಯ ಹೇಳಿದೆ.

ಆಂಧ್ರಪ್ರದೇಶದಲ್ಲಿ, ಕೌಂಡಿನ್ಯಾ ವನ್ಯಜೀವಿ ಅಭಯಾರಣ್ಯದ ಬಳಿ ಕಾಮಗಾರಿಗಳಿಗೆ ಅನುಮೋದನೆ ದೊರೆಯದೇ ಇರುವುದು ಹಿನ್ನಡೆ ಉಂಟುಮಾಡಿತು. ತಮಿಳುನಾಡಿನಲ್ಲಿ ಜನವಸತಿಗಳ ಬಳಿ ಬ್ಲಾಸ್ಟಿಂಗ್ ಮೇಲಿನ ನಿರ್ಬಂಧಗಳು, ಆರ್ಥಿಕ ನಿರ್ಬಂಧಗಳು ಮತ್ತಿತರ ಕಾರಣಗಳು ಯೋಜನೆಯನ್ನು ನಿಧಾನಗೊಳಿಸಿದವು ಎಂದು ಸಚಿವಾಲಯ ಹೇಳಿದೆ.

ಬೆಂಗಳೂರು ಚೆನ್ನೈ ಪ್ರಯಾಣದ ಅವಧಿ 3 ಗಂಟೆಗೆ ಇಳಿಕೆ

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ. ಸರಕು ಸಾಗಣೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಸಂಸದ ಪಿಸಿ ಮೋಹನ್ ಹೇಳಿದ್ದಾರೆ.

ಈ ಎಕ್ಸ್‌ಪ್ರೆಸ್‌ವೇಯಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಅವಧಿ ಆರು ಗಂಟೆಗಳಿಂದ 3 ಗಂಟೆಗೆ ಇಳಿಕೆಯಾಗಲಿದೆ. NH-44 ಮತ್ತು NH-48 ರ ದಟ್ಟಣೆ ಕಡಿಮೆಯಾಗುತ್ತದೆ. ಸರಕು ಸಾಗಣೆ ವೆಚ್ಚ ಕಡಿಮೆಯಾಗುವುದರಿಂದ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಮೋಹನ್ ಹೇಳಿದ್ದಾರೆ. ದಕ್ಷಿಣ ಭಾರತದ ಮೊದಲ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಎಂದೂ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಗುರುತಿಸಲ್ಪಡಲಿದೆ.

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಬೆಂಗಳೂರು ಚೆನ್ನೈ ಎಕ್ಸ್​ಪ್ರೆಸ್ ವೇ ಲೋಕಾರ್ಪಣೆ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಹತ್ವದ ಮಾಹಿತಿ ನೀಡಿದ್ದಾರೆ. ಒಟ್ಟಾರೆಯಾಗಿ 15,188 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 262 ಕಿ.ಮೀ ಉದ್ದದ ಎಕ್ಸ್​​ಪ್ರೆಸ್​ ವೇಯಲ್ಲಿ ಕರ್ನಾಟಕ ವ್ಯಾಪ್ತಿಯಲ್ಲಿ ಈಗಾಗಲೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಸಂಪೂರ್ಣ ಕಾಮಗಾರಿ 2025 ರ ಡಿಸೆಂಬರ್ ಮತ್ತು 2026 ರ ಮಾರ್ಚ್ ನಡುವೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ನಂತರ ಎಕ್ಸ್​​ಪ್ರೆಸ್​​​ ವೇ ಲೋಕಾರ್ಪಣೆಯಾಗಲಿದೆ. ಎಕ್ಸ್​ಪ್ರೆಸ್ ವೇ ಕಾಮಗಾರಿ ಬಗ್ಗೆ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಅವರ ಪ್ರಶ್ನೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ.

ಬೆಂಗಳೂರು-ಹೈದರಾಬಾದ್ (512 ಕಿ.ಮೀ) ಮತ್ತು ಬೆಂಗಳೂರು-ಪುಣೆ (700 ಕಿ.ಮೀ) ಎಕ್ಸ್‌ಪ್ರೆಸ್‌ವೇಗಳಿಗೆ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಸಲ್ಲಿಸಲಾಗಿದೆ ಎಂಬುದನ್ನೂ ಕೇಂದ್ರ ಸಚಿವರು ತಿಳಿಸಿದ್ದಾರೆ. ಹೊಸ ಎಕ್ಸ್‌ಪ್ರೆಸ್‌ವೇ ಜಾಲವು ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗಳು, ರಸ್ತೆಬದಿಯ ಸೌಲಭ್ಯಗಳು ಮತ್ತು ಯುಟಿಲಿಟಿ ಕಾರಿಡಾರ್‌ಗಳನ್ನು ಹೊಂದಿರುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣವೇನು?

ಎಕ್ಸ್​​ಪ್ರೆಸ್ ವೇ ಯೋಜನೆಗಳ ವಿಳಂಬಕ್ಕೆ ಕಾರಣಗಳನ್ನು ತಿಳಿಸಿದ ಅವರು, ಭೂಸ್ವಾಧೀನಕ್ಕೆ ವಿರೋಧ, ಪರಿಹಾರ ವಿತರಣೆಯಲ್ಲಿ ನಿಧಾನಗತಿ ಮತ್ತು ಧಾರ್ಮಿಕ ಕಟ್ಟಡಗಳನ್ನು ಸ್ಥಳಾಂತರಿಸುವಲ್ಲಿನ ತೊಂದರೆಗಳು ಕಾಮಗಾರಿ ವಿಳಂಬಕ್ಕೆ ಕಾರಣವಾಗಿವೆ ಎಂದು ಹೆದ್ದಾರಿ ಸಚಿವಾಲಯ ಹೇಳಿದೆ.

ಆಂಧ್ರಪ್ರದೇಶದಲ್ಲಿ, ಕೌಂಡಿನ್ಯಾ ವನ್ಯಜೀವಿ ಅಭಯಾರಣ್ಯದ ಬಳಿ ಕಾಮಗಾರಿಗಳಿಗೆ ಅನುಮೋದನೆ ದೊರೆಯದೇ ಇರುವುದು ಹಿನ್ನಡೆ ಉಂಟುಮಾಡಿತು. ತಮಿಳುನಾಡಿನಲ್ಲಿ ಜನವಸತಿಗಳ ಬಳಿ ಬ್ಲಾಸ್ಟಿಂಗ್ ಮೇಲಿನ ನಿರ್ಬಂಧಗಳು, ಆರ್ಥಿಕ ನಿರ್ಬಂಧಗಳು ಮತ್ತಿತರ ಕಾರಣಗಳು ಯೋಜನೆಯನ್ನು ನಿಧಾನಗೊಳಿಸಿದವು ಎಂದು ಸಚಿವಾಲಯ ಹೇಳಿದೆ.

ಬೆಂಗಳೂರು ಚೆನ್ನೈ ಪ್ರಯಾಣದ ಅವಧಿ 3 ಗಂಟೆಗೆ ಇಳಿಕೆ

ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ. ಸರಕು ಸಾಗಣೆ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಸಂಸದ ಪಿಸಿ ಮೋಹನ್ ಹೇಳಿದ್ದಾರೆ.

ಈ ಎಕ್ಸ್‌ಪ್ರೆಸ್‌ವೇಯಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಅವಧಿ ಆರು ಗಂಟೆಗಳಿಂದ 3 ಗಂಟೆಗೆ ಇಳಿಕೆಯಾಗಲಿದೆ. NH-44 ಮತ್ತು NH-48 ರ ದಟ್ಟಣೆ ಕಡಿಮೆಯಾಗುತ್ತದೆ. ಸರಕು ಸಾಗಣೆ ವೆಚ್ಚ ಕಡಿಮೆಯಾಗುವುದರಿಂದ ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಮೋಹನ್ ಹೇಳಿದ್ದಾರೆ. ದಕ್ಷಿಣ ಭಾರತದ ಮೊದಲ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಎಂದೂ ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ವೇ ಗುರುತಿಸಲ್ಪಡಲಿದೆ.

Spread the love
Share:

administrator

Leave a Reply

Your email address will not be published. Required fields are marked *