ಬೆಂಗಳೂರು: ನಾಳೆಯಿಂದ ನಡೆಯಬೇಕಿದ್ದ ಕೆಎಸ್ಆರ್ಟಿಸಿ ನೌಕರರ ಮುಷ್ಕರಕ್ಕೆ ಹೈಕೋರ್ಟ್ ದಿಢೀರ್ ತಡೆಯಾಜ್ಞೆ!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೇ 20ರಿಂದ ನಡೆಯಲಿದ್ದ ಮುಷ್ಕರವನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜ್ ಹಾಗೂ ನ್ಯಾ. ಡಾ.ಕೆ.ಮನ್ಮಥ ರಾವ್ ಅವರ ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ಹೆಚ್ಚುವರಿ ಅಡ್ವಕೇಟ್ ಜನರಲ್, ಸಾರಿಗೆ ಸಚಿವರು ಅಥವಾ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯಾವಾಗ ಜಂಟಿ ಕ್ರಿಯಾ ಸಮಿತಿಯ ಜೊತೆ ಸಭೆ ನಡೆಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಪಡೆದು ತಿಳಿಸಲು ಎರಡು ದಿನ ಕಾಲಾವಕಾಶ ಕೋರಿದರು.
ಜಂಟಿ ಕ್ರಿಯಾ ಸಮಿತಿ ಜತೆ ಯಾವಾಗ ಸಭೆ ನಡೆಸಲಾಗುತ್ತದೆ ಎಂಬುದನ್ನು ಗುರುವಾರ ತಿಳಿಸುವಂತೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ನ್ಯಾಯಪೀಠ ಮುಂದೂಡಿದೆ.
