Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ನಾಯಂಡಹಳ್ಳಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ ಆರು ಮಂದಿಗೆ ಗಂಭೀರ ಗಾಯ!

Spread the love

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು (Cylinder Blast), ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ.

ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡಿದ್ದಾರೆ. ರಾಯಚೂರು ಮೂಲದ ಕುಟುಂಬ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದೆ. ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದಾರೆ.

ಬೆಳಗ್ಗೆ 6 ಗಂಟೆಗೆ ಸಿಲಿಂಡರ್‌ ಸ್ಫೋಟವಾಗಿದ್ದು, ಮಕ್ಕಳು ಹಾಗೂ ದಂಪತಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಲಕ್ಷ್ಮಮ್ಮ ಮತ್ತು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

6 ಜನರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *