Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಲಾರಿ ಹರಿದು ಕೇರಳ ಮೂಲದ ಇಪಿಎಫ್ ಕಚೇರಿ ಉದ್ಯೋಗಿ ಸಾ*ವು!

Spread the love

ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ನೌಕರರ ಭವಿಷ್ಯ ನಿಧಿ (ಇಪಿಎಫ್) ಕಚೇರಿಯ ಉದ್ಯೋಗಿ, ಕೇರಳ ಮೂಲದ ಮಹಿಳೆಯೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಮೇಥಾ ಪೃಥಿರಾಜ್ (30) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮೇಥಾ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಎದುರಿನಿಂದ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಮೇಥಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಮೃತದೇಹವನ್ನು ಕೇರಳದಲ್ಲಿರುವ ಅವರ ಸ್ವಂತ ಊರಿಗೆ ಸಾಗಿಸಲಾಗಿದೆ. ಮೃತ ಮೇಥಾ ಅವರು ಕೇರಳದ ಬಲುಶ್ಶೇರಿಯ ಅರಪ್ಪೀಡಿಕಾ ಖಾದಿ ರಸ್ತೆಯ ನಿವೃತ್ತ ಶಾಲಾ ಶಿಕ್ಷಕ ಪೃಥಿರಾಜ್ ಮುದಕಲ್ಲೂರ್ ಹಾಗೂ ಉಷಾ (ನಿವೃತ್ತ ಶಿಕ್ಷಕಿ) ದಂಪತಿಯ ಪುತ್ರಿಯಾಗಿದ್ದಾರೆ. ಮೃತರು ಬೆಂಗಳೂರಿನಲ್ಲಿ ಐಟಿ ಉದ್ಯೋಗಿ ಪತಿ ಎಸ್.ಎಲ್. ಆಕರ್ಷ್, ಪುಟ್ಟ ಮಗ ದಕ್ಷ ಆಕರ್ಷ್ ಹಾಗೂ ಸಹೋದರ ಗೌತಮ್ ಪೃಥಿರಾಜ್ ಅವರನ್ನು ಅಗಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *