Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು-ಮಂಗಳೂರು: ಸೆ.5ರಂದು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ಖಾಲಿ ರೇಕ್ ಪ್ರಾಯೋಗಿಕ ಸಂಚಾರ!

Spread the love

ಮಂಗಳೂರು: ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಭಾರತೀಯ ರೈಲ್ವೆಯು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಸೆ.5ರಂದು ನಡೆಯಲಿದೆ.

ಯಶವಂತಪುರದಿಂದ ಬೆಳಗ್ಗೆ 6:05ಕ್ಕೆ ರೈಲು ಹೊರಟು ಮಧ್ಯಾಹ್ನ 2:25ಕ್ಕೆ ಮಂಗಳೂರಿಗೆ ಆಗಮಿಸಲಿದೆ. ಮಂಗಳೂರಿನಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ರಾತ್ರಿ 11ಕ್ಕೆ ಯಶವಂತರಪುರ ತಲುಪಲಿದೆ. ಪ್ರಾಯೋಗಿಕ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ವೇಳಾಪಟ್ಟಿ ನಿಗದಿಪಡಿಸಲಾಗಿದೆ.ಆಗಸ್ಟ್ 11 ರಿಂದ ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಘಾಟ್ ಪ್ರದೇಶದಲ್ಲಿ ಸಂಚರಿಸಲು ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ವ್ಯವಸ್ಥೆ ಹೊಂದಿರುವ ರೇಕ್ ಲಭ್ಯವಿಲ್ಲದ ಕಾರಣ ಈ ಪ್ರಕ್ರಿಯೆ ತಡವಾಗಿತ್ತು. ಇದೀಗ ಈಗ ಎಇಬಿ ವ್ಯವಸ್ಥೆ ಹೊಂದಿರುವ ರೇಕ್ ಬಂದಿರುವುದರಿಂದ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ತಕ್ಷಣವೇ ವಾಣಿಜ್ಯ ಸಂಚಾರಕ್ಕೆ ರೈಲ್ವೆ ಮಂಡಳಿಯಿಂದ ಅಧಿಕೃತ ಅನುಮೋದನೆ ದೊರೆಯಲಿದೆ.ವಂದೇ ಭಾರತ್ ರೈಲು ಸಾಮಾನ್ಯವಾಗಿ ಅತ್ಯಾಧುನಿಕ ಎಲೆಕ್ಟ್ರೋ-ನ್ಯೂಮ್ಯಾಟಿಕ್ ಡಿಸ್ಕ್ ಬ್ರೇಕ್ ಹಾಗೂ Regenerative Braking ವ್ಯವಸ್ಥೆಯನ್ನು ಹೊಂದಿರುತ್ತದೆ. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಮಾರ್ಗವು ಅತ್ಯಂತ ಕಡಿದಾದ ಇಳಿಜಾರು ಹೊಂದಿದೆ. ಹೀಗಾಗಿ ಈ ಮಾರ್ಗದಲ್ಲಿ ಚಲಿಸುವ ರೈಲುಗಳ ಸುರಕ್ಷತೆಗಾಗಿ ಬ್ಯಾಂಕರ್ ಇಂಜಿನ್‌ಗಳನ್ನು ಜೋಡಿಸಲಾಗುತ್ತದೆ.


Spread the love
Share:

administrator

Leave a Reply

Your email address will not be published. Required fields are marked *