Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ – ವಿದ್ಯಾರಣ್ಯಪುರ ಪೊಲೀಸರಿಂದ ಇಬ್ಬರ ಬಂಧನ!

Spread the love

ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುನೈದ್ ಪಾಷಾ ಹಾಗೂ ರಿಜ್ವಾನ್ ಬೇಗ್ ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರಿನಲ್ಲಿ ವಾಸಿಸುತ್ತಿರುವ ನೈಜೀರಿಯಾ ಮೂಲದ ವ್ಯಕ್ತಿಯೊಬ್ಬನಿಂದ ಎಂಡಿಎಂಎ ಮಾದಕ ವಸ್ತು ಪಡೆದು ಮಟನ್ ಶಾಪ್‌ನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿಗಳಿಗೆ ಎಂಡಿಎಂಎ ಪೂರೈಸುತ್ತಿದ್ದ ಎನ್ನಲಾದ ನೈಜೀರಿಯಾ ಮೂಲದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸದ್ಯ ಬಂಧಿತ ಆರೋಪಿಗಳಿಂದ 10.60 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್‌ಗಳು, ಒಂದು ಬೈಕ್ ಹಾಗೂ 2,500 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *