Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂಪುಟಕ್ಕೆ ಹಿರಿಯ ಧುರಿತ ಡಾ.ಜಿ.ಪರಮೇಶ್ವರ್ ಸೇರ್ಪಡೆ!

Spread the love

ಬೆಂಗಳೂರು : ರಾಜ್ಯ ರಾಜಕಾರಣದ ಪ್ರಮುಖ ಸ್ಥಿತ್ಯಂತರದಲ್ಲಿ, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಲಂಕರಿಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಶಿವಕುಮಾರ್ ಅವರ ಹೊಸ ಸಂಪುಟಕ್ಕೆ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಸೇರ್ಪಡೆಯಾಗಿದ್ದಾರೆ.
ತುಮಕೂರು ಸಮೀಪದ ಗೊಲ್ಲಹಳ್ಳಿ ಸಿದ್ದಾರ್ಥ ನಗರದಲ್ಲಿ 1951ರ ಏಪ್ರಿಲ್ 06 ರಂದು ಜನಿಸಿದ ಡಾ.ಜಿ.ಪರಮೇಶ್ವರ್, ಗೊಲ್ಲಹಳ್ಳಿಯಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿ, ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿದರು. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಬಿ.ಎಸ್.ಸಿ ಕೃಷಿ ಮತ್ತು ಎಂ.ಎಸ್.ಸಿ ಕೃಷಿ ಪದವಿ ಪಡೆದವರು. ತದನಂತರ ಪಿ.ಎಚ್‌.ಡಿ.ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿ ಅಭ್ಯಾಸ ಮಾಡಿ ಡಾಕ್ಟರೇಟ್ ಪದವಿ ಪಡೆದರು.

1993 ರಿಂದಲೇ ವಿವಿಧ ಮುಖ್ಯಮಂತ್ರಿಗಳ ಆಡಳಿತಗಳಲ್ಲಿ ಹಲವಾರು ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇವರು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1989, 1999 ಮತ್ತು 2004 ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಕ್ಷೇತ್ರ ಪುನ‌ರ್ ವಿಂಗಡಣೆಯ ನಂತರ 2008, 2018 ಹಾಗು 2023ರಲ್ಲಿ ಕೊರಟಗೆರೆ ಕ್ಷೇತ್ರವನ್ನು ಜಿ ಪರಮೇಶ್ವ‌ರ್ ಪ್ರತಿನಿಧಿಸಿದ್ದಾರೆ.
1989ರಲ್ಲಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಪರಮೇಶ್ವರ್ ಅವರು ಅಂದಿನ ಶಿಕ್ಷಣ ಸಚಿವ ಎಸ್.ಎಂ.ಯಾಹ್ಯಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಆಹ್ವಾನಿಸಲು ಹೋಗಿದ್ದರು. ಆ ಭೇಟಿಯ ನಂತರ ಅಂದಿನ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರು ಪರಮೇಶ್ವ‌ರ್ ಅವರನ್ನು ರಾಜಕೀಯಕ್ಕೆ ಪ್ರವೇಶಿಸುವಂತೆ ಒತ್ತಾಯ ಮಾಡಿದ್ದರು. ಹಾಗೆ ಕಾಂಗ್ರೆಸ್ ನಲ್ಲಿ ಇವರ ರಾಜಕೀಯ ಜೀವನ ಆರಂಭವಾಯಿತು.

ಪ್ರಪ್ರಥಮ ಬಾರಿಗೆ 1989ರಲ್ಲಿ ಮಧುಗಿರಿ ಕ್ಷೇತ್ರದಿಂದ ಪ್ರತಿಸ್ಪರ್ಧಿ ಜನತಾದಳದ ಸಿ.ರಾಜವರ್ಧನ್ ವಿರುದ್ಧ ಗೆದ್ದು ಶಾಸಕರಾಗಿ ಆಯ್ಕೆಯಾದರು. 1993 ರಲ್ಲಿ ವೀರಪ್ಪ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು. 1999ರಲ್ಲಿ ನಡೆದ ಚುನಾವಣೆಯಲ್ಲಿ 55,802 ಮತಗಳ ದಾಖಲೆಯ ಅಂತರದಿಂದ ಗೆದ್ದು ಎಸ್.ಎಂ.ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದರು.
2004ರಲ್ಲಿ ಮಧುಗಿರಿಯಲ್ಲಿ ಪರಮೇಶ್ವರ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಪಕ್ಷದ ಕೆಂಚಮಾರಯ್ಯ ಎಚ್ ವಿರುದ್ಧ ಗೆಲುವು ದಾಖಲಿಸಿದರು.

1989, 1999 ಮತ್ತು 2004 ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆಯ ನಂತರ 2008, 2018 ರಲ್ಲಿ ಕೊರಟಗೆರೆ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
2010 ರಲ್ಲಿ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ.
2013 ರಲ್ಲಿ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವಾಗ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೆ. ಆದರೆ ಸ್ವತಃ ಪರಮೇಶ್ವರ್ ಅವರು ಆ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಸೋಲುತ್ತಾರೆ.
2014ರ ಜುಲೈ 1 ರಂದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ 2015ರ ಅಕ್ಟೋಬರ್ ನಲ್ಲಿ ಗೃಹ ಸಚಿವರಾಗಿ ಬಳಿಕ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಳ್ಳುತ್ತಾರೆ. 2018 ರಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ರಾಜ್ಯದ ಉಪಮುಖ್ಯಮಂತ್ರಿಯಾಗುತ್ತಾರೆ. ಆಗ ಗೃಹ ಖಾತೆ ಹಾಗು ಬೆಂಗಳೂರು ನಗರಾಭಿವೃದ್ಧಿ ಜೊತೆ ಬೆಂಗಳೂರು ನಗರ ಹಾಗು ತುಮಕೂರು ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯೂ ಅವರ ಪಾಲಾಗುತ್ತೆ.
ಕಳೆದ 2023ರ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದರು. ಆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಪುನಾರಾಯ್ಕೆ ಆಗುವ ಮೂಲಕ ಮುಖ್ಯಂಂತ್ರಿ ಸಿದ್ದರಾಮಯ್ಯ ಮಂತ್ರಿಮಂಡಲದಲ್ಲಿ ಗೃಹ ಸಚಿವರಾಗಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಮತ್ತೆ ಸಚಿವರಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *