Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಬಾಗಲಗುಂಟೆಯ ಮನೆಯೊಂದರಲ್ಲಿ ವರ್ಷಗಳ ಹಿಂದೆ ಸಾವನ್ನಪ್ಪಿದ್ದ ಮಹಿಳೆಯ ಅಸ್ಥಿಪಂಜರ ಪತ್ತೆ!

Spread the love

ಬೆಂಗಳೂರು: ಬೆಂಗಳೂರಿನ ಮನೆಯೊಂದರಲ್ಲಿ ವರ್ಷಗಳ ಹಿಂದೆ ಸಾವನ್ನಪ್ಪಿದ ಮಹಿಳೆ ಅಸ್ತಿಪಂಜರ ರೂಪದಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರಿನ ಬಾಗಲಗುಂಟೆ ಪ್ರದೇಶದ ದ್ವಿಮಹಡಿ ಮನೆಯಲ್ಲಿ 52 ವರ್ಷದ ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು, ಮೃತರನ್ನು 52 ವರ್ಷದ ದಾಕ್ಷಾಯಿಣಿ ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆದರೆ ಮನೆಯೊಳಗೇ ಮೃತದೇಹ ಉಳಿದುಕೊಂಡಿದ್ದರೂ ಇದುವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬಾಗಲಗುಂಟೆಯ ಹವನೂರು ಲೇಔಟ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಕ್ಷಾಯಿಣಿ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಹಾಗೂ ಮಗನ ಸಾವಿನ ಬಳಿಕ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ಪತಿ ಉಮೇಶ್ ಸುಮಾರು 10 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ಅವರ ಮಗ ಕೂಡ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು.

ಮಹಿಳೆ ಸುಮಾರು ಒಂದು ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಅವಧಿಯಲ್ಲಿ ಅವರ ಪುತ್ರಿ ಹಾಗೂ ಅಳಿಯ ಮನೆಗೆ ಭೇಟಿ ನೀಡಿರಲಿಲ್ಲ ಎನ್ನಲಾಗಿದೆ.

ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯ ಸಾವಿಗೆ ನಿಖರ ಕಾರಣವೇನು ಮತ್ತು ಯಾವ ಪರಿಸ್ಥಿತಿಯಲ್ಲಿ ಸಾವು ಸಂಭವಿಸಿದೆ ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *