ಬೆಂಗಳೂರು: “ಸಿದ್ದರಾಮಯ್ಯ ಅವರನ್ನು 5 ವರ್ಷಕ್ಕೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ, ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಹೇಳಿಲ್ಲ” – ಸಚಿವ ಜಿ. ಪರಮೇಶ್ವರ್ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿದೆ. ಇದರ ಮಧ್ಯೆ ಗೃಹ ಸಚಿವ ಪರಮೇಶ್ವರ್ (G.Parameshwara) ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನ 5 ವರ್ಷದ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಮಾಡುವಾಗ ನಾವು ಯಾವುದೇ ಅವಧಿ ನಿಗದಿ ಮಾಡಿ ಆಯ್ಕೆ ಮಾಡಿಲ್ಲ. ನಮ್ಮ ದೃಷ್ಟಿಯಲ್ಲಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಅಂತ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಹಾಗೇನಾದ್ರೂ ಅಧಿಕಾರ ಹಂಚಿಕೆ ಆಗಿದ್ರೆ ಈ ಬಗ್ಗೆ ಹೈಕಮಾಂಡ್ ಸೇರಿ ಬೇರ‍್ಯಾರು ಹೇಳಿಲ್ಲ. ಆಯ್ಕೆ ಮಾಡುವಾಗಲೂ ಎರಡೂವರೆ ವರ್ಷಕ್ಕೆ ಸಿಎಂ ಅಂತ ಹೇಳಿಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ತೆರೆ ಎಳೆಯಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.