Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ: ಸರ್ಕಾರದಿಂದ ಹೊಸ ಆದೇಶ

Spread the love

ಉತ್ತರಾಖಂಡ್: ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆ(Government School)ಗಳಲ್ಲಿ ಭಗವದ್ಗೀತೆ(Bhagavad Gita) ಪಠಣ ಕಡ್ಡಾಯವೆಂದು ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 14ರಂದು ಆದೇಶ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್​​ನಲ್ಲಿ ಬರೆಯುವಂತೆ ಕೇಳಲಾಗಿದೆ.

ಶ್ರೀಮದ್ ಭಗವದ್ಗೀತೆಯ ತತ್ವಗಳು ಮಾನವ ಮೌಲ್ಯಗಳು, ನಡವಳಿಕೆ, ನಾಯಕತ್ವ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಭಾವನಾತ್ಮಕ ಸಮತೋಲನ ಮತ್ತು ವೈಜ್ಞಾನಿಕ ಚಿಂತನೆಯನ್ನು ಹೇಗೆ ಅಭಿವೃದ್ಧಿಪಡಿಸುತ್ತವೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿಸಿಕೊಡಲಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಸಂಪ್ರದಾಯ ಮತ್ತು ಜ್ಞಾನ ವ್ಯವಸ್ಥೆಯ ಆಧಾರದ ಜೊತೆಗೆ ವಿವಿಧ ವಿಷಯಗಳನ್ನು ಕಲಿಸಲಾಗುವುದು ಎಂದು ಶಿಕ್ಷಣ ನಿರ್ದೇಶಕ ಡಾ. ಮುಕುಲ್ ಕುಮಾರ್ ಸತಿ ಹೇಳಿದರು.

ಇದಕ್ಕೂ ಮೊದಲು, ಉತ್ತರಾಖಂಡದಲ್ಲಿ ರಾಜ್ಯ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಮೇ 6 ರಂದು ನಡೆದ ಸಭೆಯಲ್ಲಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಶ್ರೀಮದ್ ಭಗವದ್ಗೀತೆ ಮತ್ತು ರಾಮಾಯಣವನ್ನು ಅದರಲ್ಲಿ ಸೇರಿಸಲು ಸೂಚನೆಗಳನ್ನು ನೀಡಿದ್ದರು.

ಭಗವದ್ಗೀತೆ ಮತ್ತು ರಾಮಾಯಣವನ್ನು ಸಹ ರಾಜ್ಯ ಪಠ್ಯಕ್ರಮದ ಚೌಕಟ್ಟಿನಲ್ಲಿ ಸೇರಿಸಲಾಗಿದೆ ಮತ್ತು ಇದರ ಪ್ರಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಪುಸ್ತಕಗಳು ಲಭ್ಯವಾಗಲಿವೆ.

ಉತ್ತರಾಖಂಡ್ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಅವರು ಸರ್ಕಾರದ ಈ ಉಪಕ್ರಮವನ್ನು ಸ್ವಾಗತಿಸಿದ್ದು, ಶಾಲೆಗಳಲ್ಲಿ ಭಗವದ್ಗೀತೆ ಮತ್ತು ರಾಮಾಯಣವನ್ನು ಕಲಿಸುವುದು ಮತ್ತು ಜನರಿಗೆ ಅವುಗಳ ಪರಿಚಯ ಮಾಡಿಕೊಡುವುದು ಬಹಳ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ. ರಾಮ ಮತ್ತು ಕೃಷ್ಣ ಇಬ್ಬರೂ ನಮ್ಮ ಪೂರ್ವಜರು ಮತ್ತು ಪ್ರತಿಯೊಬ್ಬ ಭಾರತೀಯನು ಅವರ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *