Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ದಕ್ಷಿಣಕನ್ನಡ ಹಿಂದೂ ಮುಖಂಡರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

Spread the love

ಮಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ಹಿಂದೂ ಮುಖಂಡ ಶರಣ್ ಪಂಪ್​ವೆಲ್ (Sharan Pumpwell) ಅವರು ಹೈಕೋರ್ಟ್​​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ಹಿಂದೂ ಮುಖಂಡ ಶರಣ್ ಪಂಪ್​ವೆಲ್ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.

ವಿನಾಕಾರಣ ದ್ವೇಷ ಭಾಷಣದ ಆರೋಪ ಹೊರಿಸಲಾಗಿದೆ” ಎಂದು ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ, “ಶರಣ್ ಪಂಪ್​ವೆಲ್ ಬಂಧನ ಸೇರಿದಂತೆ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಹಾಗೆ, ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಶರಣ್ ಪಂಪ್​ವೆಲ್​ ಅವರಿಗೆ ಸೂಚನೆ ನೀಡಿದೆ.

ಏನಿದು ಪ್ರಕರಣ?

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್ವೆಲ್ ಅವರನ್ನು ಬಂಧಿಸಲಾಗಿತ್ತು. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು.

ಎಫ್‌ಐಆರ್​ಗೆ ಮಧ್ಯಂತರ ತಡೆಯಾಜ್ಞೆ

ಕಡಬ ಪೊಲೀಸರು ತಮ್ಮ ದಾಖಲಿಸಿರುವ ಎಫ್​ಐಆರ್​ ಪ್ರಶ್ನಿಸಿ ವಿಹೆಚ್​ಪಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ನವೀನ್ ನೆರಿಯ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. “ಯಾವುದೇ ಅಪರಾಧದ ಅಂಶಗಳಿಲ್ಲದಿದ್ದರೂ ಎಫ್‌ಐಆರ್ ದಾಖಲಿಸಿದ್ದಾರೆಂದು” ವಾದ ಮಂಡಿಸಿದರು. ವಾದ ವಾದ ಆಲಿಸಿದ ಹೈಕೋರ್ಟ್​ ಎಫ್‌ಐಆರ್​ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಎಫ್​ಐಆರ್​ಗೆ ಕಾರಣ

ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ ಪ್ರವೇಶಿಸಿ ಜಿಪಿಎಸ್​ ಫೋಟೋ ತೆಗೆದಿರುವುದು ಏಕೆಂದು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದರೆ ಎಂದು ಆರೋಪಿಸಿ ಕಡಬ ಪೊಲೀಸ್​ ಠಾಣೆಯ ಎದುರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್​ ದಕ್ಷಿಣ ಕನ್ನಡ ಕಾರ್ಯದರ್ಶಿ ನವೀನ್​ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್​​ಐಆರ್​ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *