Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಹಾರ: ಗಂಗಾ ನದಿಯಲ್ಲಿ ಮುಗುಚಿಬಿದ್ದ ದೋಣಿ – 13 ಮಂದಿ ಜಲಸಮಾಧಿ, ಮುಂದುವರಿದ ರಕ್ಷಣಾ ಕಾರ್ಯಾಚರಣೆ!

Spread the love

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರದ ಬಳಿ ಮಂಗಳವಾರ ರಾತ್ರಿ ಗಂಗಾ ನದಿಯಲ್ಲಿ ಸುಮಾರು 30 ಜನರನ್ನು ಕರೆದೊಯ್ಯತ್ತಿದ್ದ ದೋಣಿ ಮಗುಚಿ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಥೋಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮ್ ಪುರ್ ಶ್ಯಾಮ್ ಚಂದ್ ಗ್ರಾಮದ ನಿವಾಸಿಗಳು ಔತಣಕೂಟಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರಿದ್ದ ಕಾರಣ ನಿಯಂತ್ರಣ ತಪ್ಪಿ ದೋಣಿ ನದಿಯ ಮಧ್ಯದಲ್ಲಿ ಮಗುಚಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅವಘಡ ಸಂಭವಿಸಿದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದರು ಎಂದು ಮೂಲಗಳು ತಿಳಿಸಿದೆ.

ಈ ಕರಿತು ಪ್ರತಿಕ್ರಿಯಿಸಿದ ವೈಶಾಲಿ ಜಿಲ್ಲಾಧಿಕಾರಿ ವರ್ಷಾ ಸಿಂಗ್, ಗಂಗಾ ನದಿಯಲ್ಲಿ ರಾಘೋಪುರದ ಬಳಿ ದೋಣಿ ಮಗುಚಿದ ಪರಿಣಾಮ 13 ಮಂದಿ ಮೃತಪಟ್ಟಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ. ಇನ್ನು ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
“ಅವಘಡ ನಡೆದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಮುಳುಗು ತಜ್ಞರು, ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ತಿರ್ಹುತ್ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಚಂದನ್ ಕುಮಾರ್ ಕುಶ್ವಾಹಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೋಣಿ ದುರಂತಕ್ಕೆ ಸಂಬಂಧಿಸಿ ಸಂತಾಪವನ್ನು ಸೂಚಿಸಿದ್ದಾರೆ. ಈ ಘಟನೆ ತೀವ್ರ ನೋವುಂಟುಮಾಡಿದೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000ರೂ. ಪರಿಹಾರವನ್ನು ಘೋಷಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *