Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಪ್ರಾಪ್ತಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ರೂ. ದಂಡ – ಪೊಲೀಸ್ ಎಚ್ಚರಿಕೆ

Spread the love


ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಬೈಕ್ ಒಂದನ್ನು ತಡೆದು ನಿಲ್ಲಿಸಿದಾಗ, ಚಾಲನೆ ಮಾಡುತ್ತಿರುವುದು ಅಪ್ರಾಪ್ತ ಎಂದು ತಿಳಿದು ಬಂದಿತ್ತು. ಈ ಸಂಬಂಧ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣ ಸಂಬಂಧ ನ್ಯಾಯಾಲಯವು ಅಪ್ರಾಪ್ತ ಬಾಲಕನಿಗೆ ಚಾಲನೆ ಮಾಡಲು ನೀಡಿದ್ದಕ್ಕೆ ಬೈಕ್ ಮಾಲೀಕನಿಗೆ 25 ಸಾವಿರ ದಂಡ ವಿಧಿಸಿದೆ. ಈ ಮೂಲಕ ಅಪ್ರಾಪ್ತರಿಗೆ ಬೈಕ್ ನೀಡುವವರಿಗೆ ಪೊಲೀಸರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *