Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್; ಕಮಲ ಪಾಳಯಕ್ಕೆ ಮುನ್ನಡೆ!

Spread the love

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಟಿಎಂಸಿಗೆ ಬಿಗ್ ಶಾಕ್ ಎದುರಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಬ್ಯಾನರ್ಜಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ್ದಾರೆ.ಸದ್ಯದ ಟ್ರೆಂಡ್ ನೋಡಿಕೊಂಡು ಕಾರ್ಯಕರ್ತರು, ಪಕ್ಷದ ಏಜೆಂಟ್‌ಗಳು ಮತಗಟ್ಟೆಯಿಂದ ಹೊರಗಡೆ ಬರಬೇಡಿ. ಸದ್ಯ ಕೇವಲ ಮೂರ್ನಾಲ್ಕು ಸುತ್ತುಗಳ ಮತಎಣಿಕೆ ನಡೆದಿದೆ. ಸಂಜೆ ವೇಳೆಗೆ ಫಲಿತಾಂಶ ಬದಲಾಗಲಿದೆ. ಹಾಗಾಗಿ ಮತಗಟ್ಟೆಯಿಂದ ಹೊರಬರದಂತೆ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ.ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗೆ 148 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಸದ್ಯದ ಅಂಶಗಳ ಪ್ರಕಾರ, ಬಿಜೆಪಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ರೆ, ಟಿಎಂಸಿ 99ರಲ್ಲಿ ಮುನ್ನಡೆಯಲ್ಲಿದೆ.ಮತ್ತೊಂದೆಡೆ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇತ್ತ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಮತದಾನ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *