ಪೀಣ್ಯದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‌ಗೆ ಡಿಕ್ಕಿ: ಐವರಿಗೆ ಗಾಯ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‍ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡ ಘಟನೆ ಪೀಣ್ಯ 2ನೇ ಹಣತದಲ್ಲಿ ನಡೆದಿದೆ.

ಬಸ್ ಡ್ರೈವರ್ ಮತ್ತು ಕಂಡಕ್ಟರ್ ನಡುವೆ ಜಗಳವಾಗಿದೆ. ಈ ವೇಳೆ ಕಂಡಕ್ಟರ್ ಬಸ್ ರಮೇಶ್ ಬಸ್ ಚಲಾಯಿಸಿದ್ದಾನೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ, ಫುಟ್‍ಪಾತ್ ಏರಿ ಹೋಟೆಲ್‍ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹೋಟೆಲ್‍ಗೆ ಬಸ್ ಡಿಕ್ಕಿಯಾದ ಕೂಡಲೇ ಸಿಲಿಂಡರ್ ನಿಂದ ಬೆಂಕಿ ಬಿದ್ದಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದ್ದಾರೆ
