ಸುಬ್ರಹ್ಮಣ್ಯದಲ್ಲಿ ಶವ ಪತ್ತೆ: ನಾಪತ್ತೆಯಾಗಿದ್ದ ಹಾಸನ ಮಹಿಳೆ ಎಂದು ದೃಢೀಕರಣ

ಸುಬ್ರಹ್ಮಣ್ಯ: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ.ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.

ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.