Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಂಗ್ಲಾದಲ್ಲಿ ಬಾಂಬ್ ಸ್ಫೋಟ: ಒಬ್ಬನ ಸಾವು

Spread the love

ಢಾಕಾ: ಬಾಂಗ್ಲಾದೇಶದ ರಾಜಧಾನಿಯ ಮೊಗ್‍ ಬಜಾರ್ ಪ್ರದೇಶದಲ್ಲಿ ಗುಂಪೊಂದು ಬುಧವಾರ ರಾತ್ರಿ ಫ್ಲೈಓವರ್‍ ನಿಂದ ಕಚ್ಚಾ ಸ್ಫೋಟಕವನ್ನು ಎಸೆದಾಗ ಸಂಭವಿಸಿದ ದುರಂತದಲ್ಲಿ ಒಬ್ಬ ಮೃತಪಟ್ಟಿದ್ದು, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.

ಮೊಗ್‍ಬಜಾರ್‍ ನ ಸ್ವಾತಂತ್ರ್ಯ ಯೋಧರ ಸ್ಮಾರಕದ ಎದುರಿನ ಮೇಲ್ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಸೇತುವೆ ಮೇಲಿನಿಂದ ಎಸೆಯಲ್ಪಟ್ಟ ಬಾಂಬ್ ಸ್ಫೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆಯಲ್ಲಿ ಸಿಯಾಮ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಫ್ಲೈಓವರ್‍ ನಿಂದ ವ್ಯಕ್ತಿಯೊಬ್ಬ ಕಾಕ್‍ ಟೇಲ್ ಬಾಂಬ್ ಎಸೆದಿದ್ದು, ಇದು ಸಂತ್ರಸ್ತ ವ್ಯಕ್ತಿಯ ತಲೆ ಮೇಲೆ ಬಿದ್ದು ಸ್ಫೋಟಗೊಂಡಿದೆ. ಅದು ತಲೆಯನ್ನು ಸಿಡಿಸಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಯಾಮ್ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಾಗೂ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಆ ಜಾಗದಲ್ಲಿ ಹಾದು ಹೋಗುತ್ತಿದ್ದ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ತಕ್ಷಣಕ್ಕೆ ಆತನ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ಸಂಬಂಧಿಕರು ದೃಢಪಡಿಸಿದರು.


Spread the love
Share:

administrator

Leave a Reply

Your email address will not be published. Required fields are marked *