ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ, ಭದ್ರತೆ ಬಿಗಿ

ತುಮಕೂರು:ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ತುಮಕೂರಿನಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ.

ತುಮಕೂರು ರೈಲ್ವೆ ನಿಲ್ದಾಣದಲ್ಲಿ ಶನಿವಾರ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತಪಾಸಣೆ ನಡೆಸಿತು. ಪ್ರಯಾಣಿಕರ ಲಗ್ಗೇಜ್‌ಗಳನ್ನು ಪರಿಶೀಲಿಸುವುದರ ಜೊತೆಗೆ ನಿಲ್ದಾಣದ ಸುತ್ತಮುತ್ತ ಪಾರ್ಕ್ ಮಾಡಲಾಗಿದ್ದ ವಾಹನಗಳಿಗೂ ತಪಾಸಣೆ ನಡೆಸಲಾಯಿತು.
ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಹದ್ದಿನ ಕಣ್ಣು ಇಟ್ಟಿರುವ ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.