Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ:ಶಾಲೆಗಳಲ್ಲಿ ಭದ್ರತೆ ಹೆಚ್ಚಳ

Spread the love

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು, ಕಲಾಸಿಪಾಳ್ಯ ಮತ್ತು ರಾಜರಾಜೇಶ್ವರಿ ನಗರದಲ್ಲಿ ಇರುವ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ  ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಸ್ಥಳೀಯ ಪೋಲಿಸರು  ತಕ್ಷಣವೇ ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಹೈದರಾಬಾದ್​ನಲ್ಲಿ ನಡೆದ ಯಾವ ಅತ್ಯಾಚಾರ ಪ್ರಕರಣ ಸಂಬಂಧ ದುಷ್ಕರ್ಮಿಗಳು ಈ ಬೆದರಿಕೆ ಹಾಕಿದ್ದಾರೆ? ಕರ್ನಾಟಕಕ್ಕೂ ಅದಕ್ಕೂ ಸಂಬಂಧವೇನು ಎನ್ನುವ ಪ್ರಶ್ನೆಗಳು ಈಗ ಉದ್ಭವಿಸಿವೆ.

ಸೋಮವಾರ ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟ ಮಾಡಿ ಕಟ್ಟಡ ಧ್ವಂಸ ಮಾಡುವುದಾಗಿ ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿದ್ಯಾಸೌಧ ಕಿಡ್ಸ್‌ ಶಾಲೆಗೆ ಭಾನುವಾರ ರಾತ್ರಿ ಬೆದರಿಕೆ ಸಂದೇಶ ಬಂದಿತ್ತು. ಅದರಂತೆ, ಶಾಲೆಯ ಆಡಳಿತ ಮಂಡಳಿಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹಾಗೂ ಶ್ವಾನ ದಳ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ತಿಂಗಳ ಅವಧಿಯಲ್ಲಿ ನಾಲ್ಕನೇ ಬಾಂಬ್ ಬೆದರಿಕೆ

ಕರ್ನಾಟಕದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವರ್ಷ ಬೆಂಗಳೂರಿನ ವೈಟ್​​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್​​ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಹುಸಿ ಬೆದರಿಕೆ ಸಂದೇಶಗಳು ಹೆಚ್ಚಾಗಿವೆ. ಅದರಲ್ಲಿಯೂ ಸರಿಸುಮಾರು ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಬಾಂಬ್ ಬೆದರಿಕೆ ಪ್ರಕರಣ ಆಗಿದೆ.

ಬೆಂಗಳೂರು ವಾರಾಣಸಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬೆದರಿಕೆ ಸಂದೇಶ ಏಪ್ರಿಲ್ 27 ರಂದು ಬಂದಿತ್ತು. ಅದಾದ ಎರಡು ದಿನಗಳ ನಂತರ, ಅಂದರೆ ಏಪ್ರಿಲ್ 29 ರಂದು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪ್ರಾಂಶುಪಾಲರಿಗೆ ಕೊಲೆ ಬೆದರಿಕೆಯನ್ನೂ ಹಾಕಲಾಗಿತ್ತು. ಇದೀಗ ಹಾಸನ ಮತ್ತು ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *