Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಿಎಂ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಪೊಲೀಸರಿಗೆ ಕರೆ ಮಾಡಿ ಆತಂಕ ಸೃಷ್ಟಿಸಿದ ಕಿಡಿಗೇಡಿ!

Spread the love

ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಪೊಲೀಸರಿಗೆ (Police) ಕರೆ ಮಾಡಿದ ಅಪರಿಚಿತ ವ್ಯಕ್ತಿ ಬಾಂಬ್ ಬೆದರಿಕೆ ಹಾಕಿದ್ದಾನೆ.

ನವೆಂಬರ್‌ 7ನೇ ತಾರೀಖಿನಂದು ಈ ಘಟನೆ ನಡೆದಿದ್ದು, ಭಗವಂತರಾಯನ್ ಎಂಬವರು ನಮ್ಮ ಯಾತ್ರಿ ಆ್ಯಪ್ ಮೂಲಕ ಆಟೋ ಚಾಲನೆ ಮಾಡುತ್ತಿದ್ದರು. ಅಂದು ಕಾರ್ತಿಕ್ ಎಂಬಾತ ಸದಾಶಿವನಗರದಿಂದ ಆರ್.ಆರ್ ನಗರಕ್ಕೆ ತೆರಳಲು ಆಟೋ ಬುಕ್ ಮಾಡಿದ್ದ. ಆಟೋ ಬುಕ್ ಮಾಡಿದ ಕಾರ್ತಿಕ್ ಪಿಕಪ್ ಲೊಕೇಶನ್ ಕಳುಹಿಸಿದ್ದು, ಅದು ಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸದ ಸಮೀಪ ತೋರಿಸಿತ್ತು. ಹೀಗಾಗಿ ಲೊಕೇಶನ್‌ಗೆ ತೆರಳಿದ ಆಟೋ ಚಾಲಕ, ಬುಕ್ಕಿಂಗ್ ಮಾಡಿದ್ದ ವ್ಯಕ್ತಿಗೆ ಕರೆ ಮಾಡಿದ್ದಾನೆ.

ಈ ವೇಳೆ ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ, ನಾನು ಸಿಎಂ ಮನೆಯಲ್ಲಿ ಇದ್ದೇನೆ. ಇಲ್ಲಿ ಬ್ಯಾರಿಕೇಡ್ ಬಳಿ ಪೊಲೀಸರು ಇದ್ದಾರೆ. ಅವರಿಗೆ ಫೋನ್ ಕೊಡು ಅಂತಾ ಹೇಳಿದ್ದಾನೆ. ಅದರಂತೆ ಆಟೋ ಚಾಲಕ ಅಲ್ಲಿದ್ದ ಪೊಲೀಸರಿಗೆ ಮೊಬೈಲ್ ನೀಡಿದ್ದಾನೆ. ಪೊಲೀಸರು ಫೋನ್ ಸ್ವೀಕರಿಸುತ್ತಿದ್ದಂತೆ ಮಾತನಾಡಿದ ಅಪರಿಚಿತ ವ್ಯಕ್ತಿ, ಸಿಎಂ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ (Bomb Threat) ಹಾಕಿ ಕಾಲ್‌ ಕಟ್‌ ಮಾಡಿದ್ದಾನೆ. ಇದರಿಂದ ಆತಂಕಗೊಂಡ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.

ಮೊದಲಿಗೆ ಪಿಕಪ್ ಸ್ಥಳಕ್ಕೆ ಬಂದಿದ್ದ ಆಟೋವನ್ನು ಪರಿಶೀಲಿಸಿದ ಪೊಲೀಸರು, ಬಳಿಕ ಸಿಎಂ ನಿವಾಸ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಪಾಸಣೆ ನಡೆಸಿದ್ದಾರೆ. ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ತಿಳಿದು ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕ ಭಗವಂತರಾಯನ್ ನೀಡಿದ ದೂರಿನ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *