Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಶಾಲಾ ಬಾಲಕನ ದುರ್ಮರಣ, ಸ್ಥಳೀಯರು ಸುರಕ್ಷತೆಯ ಒತ್ತಾಯ

Spread the love

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *