Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ 2033ರವರೆಗೆ ಬ್ರೇಕ್! ಕೇಂದ್ರ ಸರ್ಕಾರ ನೀಡಿದ ಸ್ಪಷ್ಟನೆ ಏನು?

Spread the love

ನವದೆಹಲಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(KIA) 25 ವರ್ಷ ಪೂರ್ಣಗೊಳ್ಳುವ ಮುನ್ನ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ (Bengaluru Airport) ಆರಂಭವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಸಂಸದ ಪಿಸಿ ಮೋಹನ್‌ (PC Mohan) ಹೆಚ್‌ಎಎಲ್‌ ವಿಮಾನ ನಿಲ್ದಾಣ (HAL Airport) ಪುನಾರಂಭ ಮತ್ತು ಎರಡನೇ ವಿಮಾನ ನಿಲ್ದಾಣ ಆರಂಭ ಸಂಬಂಧ ಸ್ಥಳ ಪರಿಶೀಲನೆ ವರದಿ ಏನಾಯ್ತು ಎಂದು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಮುರುಳೀಧರ್ 3 ಸ್ಥಳಗಳ ಬಗ್ಗೆ ಅಧ್ಯಯನ ನಡೆದಿದೆ. ಆದರೆ ಕೇಂದ್ರ ಸರ್ಕಾರದ ನೀತಿಯಡಿಯಲ್ಲಿ ಯಾವುದೇ ಪ್ರಸ್ತಾವನೆಯನ್ನು ಸ್ವೀಕರಿಸಿಲ್ಲ ಎಂದು ಉತ್ತರಿಸಿದ್ದಾರೆ. 

ಕೇಂದ್ರ ಸರ್ಕಾರ ಹೇಳಿದ್ದೇನು?
ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ಮನವಿಯ ಮೇರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಮೂರು ಸ್ಥಳಗಳ ಪೂರ್ವ ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿತ್ತು. ಈ ಅಧ್ಯಯನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ಆ ಬಳಿಕ ಯಾವುದೇ ಪ್ರಸ್ತಾವ ಬಂದಿಲ್ಲ.

2008ರಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (BIAL) ಮತ್ತು ಕೇಂದ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದವು. ಈ ಒಪ್ಪಂದದ ಅನ್ವಯ ಬೆಂಗಳೂರು ವಿಮಾನ ನಿಲ್ದಾಣಕ್ಕೆ 25 ವರ್ಷ ಆಗುವ ತನಕ 150 ಕಿ.ಮೀ. ವ್ಯಾಪ್ತಿಯಲ್ಲಿ ಮೈಸೂರು ಹಾಗೂ ಹಾಸನ ಹೊರತುಪಡಿಸಿ ಬೇರೆ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವಂತಿಲ್ಲ. ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಕಾರ್ಯಾಚರಣೆ ನಡೆಸುವಂತೆಯೂ ಇಲ್ಲ. ಇಲ್ಲಿ ಕಾರ್ಯಾಚರಣೆ ನಡೆಸಲು ಮುಂದಾದಲ್ಲಿ ಅದಕ್ಕೆ BIAL ಒಪ್ಪಿಗೆ ಪಡೆಯಬೇಕು. 

ಬೆಂಗಳೂರು ಕಂಪೇಗೌಡ ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ವೈಮಾನಿಕ ಅಂತರದಲ್ಲಿ 25 ವರ್ಷಗಳವರೆಗೆ ಯಾವುದೇ ಹೊಸ ಅಥವಾ ಅಸ್ತಿತ್ವದಲ್ಲಿರುವ ದೇಶೀಯ ವಿಮಾನ ನಿಲ್ದಾಣಗಳನ್ನು ತೆರೆಯಬಾರದು ಎಂಬ ಷರತ್ತು ಇದೆ. ಈ ಷರತ್ತು 2033ಕ್ಕೆ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರ ಬೆಂಗಳೂರಿಗೆ ಹೊಂದಿಕೊಂಡಂತೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *