ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತಂತೆ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.