Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ಕ್ರೂರ ಹಿಂಸೆ

Spread the love

ಉತ್ತರ ಪ್ರದೇಶ :ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮನೆಯ ಹೊರಗೆ ನೀರು ತುಂಬಿಸುವಾಗ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮನೆಯ ಹೊರಗೆ ನೀರು ತುಂಬಿಸುವಾಗ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ವಿಡಿಯೋದಲ್ಲಿ ಇಬ್ಬರು ಹುಡುಗರು ಅಪ್ರಾಪ್ತ ಬಾಲಕಿಯನ್ನು ಥಳಿಸುತ್ತಿರುತ್ತಾರೆ. ಒಬ್ಬ ಬೆಲ್ಟ್‌ನಿಂದ ಹೊಡೆದರೆ, ಮತ್ತೊಬ್ಬ ಕೈಯಿಂದ ಮನಬಂದಂತೆ ಥಳಿಸುತ್ತಿರುತ್ತಾನೆ. ಈ ವೇಳೆ ಮಹಿಳೆಯೊಬ್ಬರು ಮಧ್ಯೆ ತಪ್ಪಿಸಲು ಬಂದಿದ್ದು, ಆಕೆಯೂ ಬಾಲಕಿಯ ಜಿಟ್ಟು ಹಿಡಿದು ಎಳೆದಾಡಿದ್ದಾರೆ.

ಸ್ಥಳದಲ್ಲಿದ್ದ ಮಹಿಳೆಯೊಬ್ಬರು ಈ ದೃಶ್ಯವನ್ನು ವಿಡಿಯೋ ಮಾಡಿದ್ದು, ಆರೋಪಿ ವಿಡಿಯೋ ಮಾಡುತ್ತಿರುವ ಮಹಿಳೆ ಮೇಲೆ ಕೂಡ ಹಲ್ಲೆ ಮಾಡಿದ್ದಾನೆ. ವಿಡಿಯೋದಲ್ಲಿ ಸ್ಥಳೀಯರು ಆಕೆಯನ್ನು ಹೊಡೆಯಬೇಡಿ ಎಂದು ಹೇಳುವುದನ್ನು ಕಾಣಬಹುದು. ಆದರೆ ಎಲ್ಲರ ಮಾತಿಗೂ ಡೋಂಟ್‌ಕೇರ್‌ ಎಂದಿರುವ ಯುವಕರು ಬಾಲಕಿ ನೆಲಕ್ಕೆ ಬಿದ್ದರೂ ಬಿಡದೇ ಆಕೆಯನ್ನು ಥಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು ಸಂತ್ರಸ್ತೆಯಿಂದ ದೂರು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *