Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಜೆಟ್ 2026: ಕೇಂದ್ರದಿಂದ ರಾಜ್ಯಕ್ಕೆ ಸತತ ಅನ್ಯಾಯ; ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

Spread the love

ಬೆಂಗಳೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿಂದು 2026ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.
ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ತನ್ನ ಪಾಲಿನ ಕಡಿತ, ಕೇಂದ್ರದ ಯೋಜನೆಗಳಲ್ಲಿ ತಾರತಮ್ಯ 15ನೇ ಹಣಕಾಸು ಆಯೋಗದ ಶಿಫಾರಸುಗಳಿಂದ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ, ಅದೇ ಆಯೋಗವು ಮಾಡಿದ್ದ ವಿಶೇಷ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡದ ಕಾರಣ ಉಂಟಾದ ಆರ್ಥಿಕ ನಷ್ಟ ಮತ್ತು ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಅಕಾಲಿಕ ನಿರ್ಧಾರದಿಂದ ರಾಜ್ಯದ ಬೊಕ್ಕಸದ ಮೇಲೆ ಬಿದ್ದ ಹೆಚ್ಚುವರಿ ಹೊರೆ ಹಾಗೂ ಒತ್ತಡಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸಿರುವುದರಿಂದ ಜನರ ಉದ್ಯೋಗದ ಹಕ್ಕುಗಳು ಮೊಟಕಾಗಲಿವೆ ಮತ್ತು ರಾಜ್ಯಗಳ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಈ ಕಾರಣಗಳಿಂದ ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸುವ ನಮ್ಮ ಸಂಕಲ್ಪವನ್ನು ಈ ಆಯವ್ಯಯ ದೃಢಪಡಿಸುತ್ತದೆ. ಕೇಂದ್ರ ಸರಕಾರದ ಅಸಹಕಾರದ ನಡುವೆಯೂ ಆರ್ಥಿಕ ಬೆಳವಣಿಗೆಯೊಂದಿಗೆ ವಿತ್ತೀಯ ಶಿಸ್ತು ಪಾಲಿಸಲು ಸಾಧ್ಯವಾಗಿರುವುದು ನಮ್ಮ ಆಡಳಿತ ವಿಧಾನದ ಮಾದರಿಯಾಗಿದೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಈ ಆಯವ್ಯಯವು ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ರೂಪಿತವಾಗಿದೆ. ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.


Spread the love
Share:

administrator

Leave a Reply

Your email address will not be published. Required fields are marked *