Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆರೆಯ ಏರಿ ಮೇಲೆ ಮರಕ್ಕೆ ಡಿಕ್ಕಿ ಹೊಡೆದ ಬಸ್ ವಿದ್ಯಾರ್ಥಿಗಳು ಕೂದಲೆಳೆ ಅಂತರ

Spread the love

ಹಾಸನ/ಮಂಗಳೂರು: ಖಾಸಗಿ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್​​ ಕೆರೆಯ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕೆರೆ ಕಡೆಗೆ ವಾಲಿನಿಂತ ಘಟನೆ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಮುಕ್ಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಬಸ್​​ ಕೆರೆಗೆ ಬೀಳುವುದು ತಪ್ಪಿದ್ದು, 40 ವಿದ್ಯಾರ್ಥಿಗಳು ಈ ಶಾಲಾ ಬಸ್​​ನಲ್ಲಿದ್ದರು ಎನ್ನಲಾಗಿದೆ.

ಅಪಘಾತಕ್ಕೀಡಾಗಿರುವ ಬಸ್​​ ಶ್ರೀ ಸಿದ್ದರಾಮೇಶ್ವರ ಶಾಲೆಗೆ ಸೇರಿದ್ದಾಗಿದ್ದು, ಬೆಳಿಗ್ಗೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವ ವೇಳೆ ಅಪಘಡ ನಡೆದಿದೆ. ಮರಕ್ಕೆ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್‌ನಿಂದ ವಿದ್ಯಾರ್ಥಿಗಳು ಕೆಳಗಿಳಿದ ಪರಿಣಾಮ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳದಲ್ಲಿ ವಿದ್ಯಾರ್ಥಿಗಳ ಪೋಷಕರು ಜಮಾಯಿಸಿದ್ದು, ಘಟನೆ ಬಳಿಕ ಸ್ಕೂಲ್​​ ಬಸ್​​ಗೆ ಎಫ್‌ಸಿ ಹಾಗೂ ಇನ್ಶೂರೆನ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳ್ಳಿಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *