ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡದ ಮುಂಡಗೋಡು ತಾಲೂಕಿನ ಮಳಗಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.

ಹೌದು ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಿಂದ ಹುಬ್ಬಳ್ಳಿಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ಕುರಿತು ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಅದೇ ರೀತಿ ಮೈಸೂರಿನಲ್ಲಿ ಕೆಎಸ್ಆರ್ಟಿಸಿ ಡಕೋಟಾ ಬಸ್ ಕೈಕೊಟ್ಟಿದೆ. ಬಸ್ ಅನ್ನು ಪ್ರಯಾಣಿಕರು ತಳ್ಳಿದ್ದಾರೆ. ಮಹಿಳೆಯರು ಮಕ್ಕಳು ಮತ್ತು ಹಿರಿಯರು ಬಸ್ ಅನ್ನು ತಳ್ಳಿದ್ದಾರೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಸಾರಿಗೆ ಇಲಾಖೆ ಸಚಿವರಾಮಲಿಂಗ ರೆಡ್ಡಿ ಸೂಚನೆ ಕೊಟ್ಟರು ಕೂಡ ಇಲಾಖೆ ಮೈಮರೆತು ಕುಳಿತಿದ್ದು ಇಂತಹ ಡಕೋಟಾ ಬಸ್ ಗಳಿಂದಲೇ ಹೆಚ್ಚಿನ ಅನಾಹುತ ಆಗುವ ಸಾಧ್ಯತೆ ಇರುತ್ತದೆ.