Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾಲಕನ ನಿಯಂತ್ರಣ ತಪ್ಪಿ ಬಸ್ ಮೋರಿಗೆ ಪಲ್ಟಿ – ಪಿಎಸ್‌ಐ ನಾಗರಾಜ್ ಸೇರಿ ಇಬ್ಬರ ಸಾವು

Spread the love

ರಾಮನಗರ: ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಮೋರಿಗೆ ಪಲ್ಟಿಯಾದ ಪರಿಣಾಮ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗ‌ರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ ಹತ್ತಿಸಿದ್ದಾನೆ. ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *