Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ – ಮನಗೂಳಿ ಶಾಖೆಯಿಂದ ಲಕ್ಷಾಂತರದ ಚಿನ್ನಾಭರಣ ಕಳ್ಳತನ

Spread the love

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್​ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ (ಮೇ.24) ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಬ್ಯಾಂಕ್​ಗೆ ಬಂದಿಲ್ಲ.

ಇನ್ನು, ಬ್ಯಾಂಕ್ ಕಳ್ಳತನವಾದ ಸುದ್ದಿ ತಿಳಿದು, ಸಿಬ್ಬಂದಿ, ಮನಗೂಳಿ ಠಾಣೆ ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿದೆ. ಶ್ವಾನದಳ ಹಾಗೂ ಪೋಲಿಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *