ಮಣಿಪಾಲದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಅಪಘಾತದ ಬಳಿಕ ಚಾಲಕ ಪರಾರಿ

ಉಡುಪಿ : ಮಣಿಪಾಲ ಪೊಲೀಸ್ ಠಾಣೆ ಎದುರು ಇರುವ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.

ಮಣಿಪಾಲದಿಂದ ಉಡುಪಿಯತ್ತ ಅತೀ ವೇಗದಲ್ಲಿ ಆಗಮಿಸಿದ ಬೆಂಗಳೂರು ನೋಂದಣಿ ಇರುವ ಕಾರು ಇದಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದೆ. ಅಪಘಾತ ನಡೆದ ಕೂಡಲೇ ಆತ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.