Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯುಂಟುಮಾಡಿದ ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ ದಾಖಲು

Spread the love

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರು ನೀಡಿದ ದೂರಿನಂತೆ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *