Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಂಬೋಲಿ ಘಾಟ್‌ನಲ್ಲಿ ಭಾರೀ ಭೂಕುಸಿತ: ಬೆಳಗಾವಿ–ಸಿಂಧುದುರ್ಗ ರಸ್ತೆ ಬಂದ್!

Spread the love

ಬೆಳಗಾವಿ: ಭಾರೀ ಮಳೆಯಿಂದಾಗಿ ನೆರೆಯ ಮಹಾರಾಷ್ಟ್ರದ ಜನಪ್ರಿಯ ಅಂಬೋಲಿ ಜಲಪಾತ ಸಮೀಪ ಭೂಕುಸಿತ ಸಂಭವಿಸಿದ್ದು, ಬೆಳಗಾವಿ–ಸಿಂಧುದುರ್ಗ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಘಟನೆ ಪ್ರಯಾಣಿಕರು ಹಾಗೂ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.
ಮಹಾರಾಷ್ಟ್ರದ ಸಾವಂತವಾಡಿ ತಾಲ್ಲೂಕಿನ ಅಂಬೋಲಿ ಜಲಪಾತದ ಸಮೀಪ ನಿನ್ನೆ ಮಂಗಳವಾರ ತಡರಾತ್ರಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಿಂದ ಹಲವಾರು ಬೃಹತ್ ಬಂಡೆಗಳು ಉರುಳಿ ರಸ್ತೆಗೆ ಬಿದ್ದಿದ್ದು, ಕನಿಷ್ಠ ನಾಲ್ಕು ಬೃಹತ್ ಬಂಡೆಗಳ ಕುಸಿತದಿಂದ ರಸ್ತೆ ಸಂಪೂರ್ಣ ತಡೆದಿವೆ. ಪರಿಣಾಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಘಟನೆ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದ್ದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ವಾಹನಗಳಿಗೆ ಹಾನಿಯಾಗಿಲ್ಲ.ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಚಂದಗಡದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಸ್ತೆ ತೆರವು ಕಾರ್ಯಾಚರಣೆ ಆರಂಭಿಸಿದರು. ಸಿಂಧುದುರ್ಗ ಜಿಲ್ಲಾ ಉಸ್ತುವಾರಿ ಸಚಿವ ನಿತೇಶ್ ರಾಣೆ ಅವರ ಸೂಚನೆಯಂತೆ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬೃಹತ್ ಬಂಡೆಗಳನ್ನು ತೆರವುಗೊಳಿಸಿ ಸಂಪರ್ಕವನ್ನು ಪುನಃ ಸ್ಥಾಪಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಯಿತು.
ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಮಹಾರಾಷ್ಟ್ರ ಪೊಲೀಸರು ಕಟ್ಟುನಿಟ್ಟಿನ ನಿಯಂತ್ರಣದೊಂದಿಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ರಸ್ತೆಯನ್ನು ಭಾಗಶಃ ತೆರೆದರು.
ನಿರಂತರ ಮಳೆಯಿಂದಾಗಿ ಘಾಟ್ ಪ್ರದೇಶದಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *