Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

🌾 ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ರೋಗದ ಅಬ್ಬರ: 300 ಕೋಟಿಗೂ ಅಧಿಕ ನಷ್ಟದ ಬೆನ್ನಲ್ಲೇ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

Spread the love

ಶಿವಮೊಗ್ಗ : ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಕಳೆದ ಮೂರು ವರ್ಷಗಳಿಂದ ಎಲೆ ಚುಕ್ಕೆ ರೋಗ ಮತ್ತು ಕೊಳೆ ರೋಗ ತಗುಲಿದ್ದು, ಇದರಿಂದ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ; ಅದರಲ್ಲೂ 2024-25ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಈ ರೋಗಗಳಿಂದಾಗಿ ಉಂಟಾದ ಒಟ್ಟು ಆರ್ಥಿಕ ನಷ್ಟವು ಬರೋಬ್ಬರಿ 300 ಕೋಟಿ ರೂಪಾಯಿಗಳ ಗಡಿಯನ್ನು ದಾಟಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಕೇಂದ್ರೀಯ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳ ವರದಿ ಸ್ಪಷ್ಟಪಡಿಸಿದೆ.

ಈ ಗಂಭೀರ ವಿಷಯದ ಕುರಿತು ಸಂಸದ ಬಿ.ವೈ. ರಾಘವೇಂದ್ರ ಅವರು ಸಂಸತ್ತಿನಲ್ಲಿ ಎತ್ತಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್ ಅವರು, 2022ರಿಂದ ಜಿಲ್ಲೆಯಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶವು ಈ ರೋಗಗಳಿಗೆ ತುತ್ತಾಗಿದ್ದು, ಇದನ್ನು ಹತೋಟಿಗೆ ತರಲು ಅಡಿಕೆ ಮತ್ತು ಸಾಂಬಾರ ಅಭಿವೃದ್ಧಿ ನಿರ್ದೇಶನಾಲಯದ ಮೂಲಕ ಕಳೆದ ಮೂರು ವರ್ಷಗಳಲ್ಲಿ 6.31 ಕೋಟಿ ರೂ. ಹಾಗೂ ಕರ್ನಾಟಕ ರಾಜ್ಯ ತೋಟಗಾರಿಕಾ ಮಿಷನ್‌ಗೆ 2024-25ರಲ್ಲಿ *3,700 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರೋಗ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಪ್ರತಿ ಹೆಕ್ಟೇರ್‌ಗೆ 1,500 ರೂ.ಗಳ ಸಹಾಯಧನವನ್ನು ನೀಡಲಾಗುತ್ತಿದ್ದು, 2025-26ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರತ್ಯೇಕವಾಗಿ *189.25 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ; ಅಷ್ಟೇ ಅಲ್ಲದೆ, ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯೊಂದರಿಂದಲೇ 1.18 ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ತಾಂತ್ರಿಕ ನೆರವು ಮತ್ತು ಪರಿಹಾರ ಧನವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *