Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೈಕ್, ಕಾರು ಮತ್ತು ಟ್ಯಾಂಕರ್ ಮಧ್ಯೆ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು.

Spread the love

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರಿಗೆ ಟ್ಯಾಂಕರೊಂದು ಢಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್(ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಕಮಲಾಪುರ ತಾಲ್ಲೂಕಿನ ಶಿರಡೋಣ ಗ್ರಾಮದ ನಾಗೇಂದ್ರಪ್ಪ (33), ಶಿವರಾಜ್(32), ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದ್ರಕಲಾ(70) ಹಾಗೂ ದತ್ತಾತ್ರೇಯ(48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಉತ್ತಮ(36) ಹಾಗೂ ಸುದೇಶ್ನಾ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಮನಾಬಾದ್ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಕಾರಿಗೆ ಹುಮನಾಬಾದ್ ಕಡೆಯಿಂದ ಕಲಬುರಗಿಯತ್ತ ಹೋಗುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ ನಲ್ಲಿದ್ದ ಇಬ್ಬರು ಸವಾರರು ಮತ್ತು ಕಾರಿನಲ್ಲಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *