Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾಮುಂಡಿ ಬೆಟ್ಟ ಹಿಂದೂಗಳದ್ದೇ – ಡಿಕೆಶಿ ಹೇಳಿಕೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ತಿರುಗೇಟು

Spread the love

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. 

ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳ ಏನೂ ಬೇಕಾದರು ಹೇಳಲಿ. ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದಂತೆ ಆಗಲ್ಲ ಎಂದು ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

ದೇವಸ್ಥಾನ ವಿಚಾರದಲ್ಲಿ ನಮ್ಮ ಮನೆತನ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಆದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗೋದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ ಎಂದಿದ್ದಾರೆ.

ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ. ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರವರು ತಮಗೆ ಬೇಕಾದ ರೀತಿ ದಸರಾ ಮಾಡುತ್ತಾರೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ, ಅಲ್ಲಿಗೆ ಹೋಗಲ್ಲ. ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *