Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚನ್ನಪಟ್ಟಣ: ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ, ಪರಿಶೀಲನೆ!

Spread the love

ಚನ್ನಪಟ್ಟಣ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು (ತುರ್ತು ನಿಗಾ ಘಟಕ) ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಅವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನು ತಪಾಸಣೆ ನಡೆಸಿ ಕರ್ತವ್ಯದಲ್ಲಿದ್ದ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುವುದಕ್ಕೆ ಖಾದರ್ ಗರಂ:
ಆಸ್ಪತ್ರೆಯಲ್ಲಿ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಗೆ ಔಷಧಿ ಬರೆದುಕೊಡುತ್ತಿರುವ ವಿಚಾರ ತಿಳಿದು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಮತ್ತು ಔಷಧಿಗಳಿದ್ದರೂ, ರೋಗಿಗಳಿಗೆ ಹೊರಗಡೆ ಔಷಧಿಗಳನ್ನು ಬರೆದುಕೊಡುವುದು ಏಕೆ?” ಎಂದು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಕ್ಷಣವೇ ಸೂಕ್ತ ಮತ್ತು ಸಮಯೋಚಿತ ಚಿಕಿತ್ಸೆ ನೀಡಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಅವರು ಖಡಕ್ ಸೂಚನೆ ನೀಡಿದರು.


Spread the love
Share:

administrator

Leave a Reply

Your email address will not be published. Required fields are marked *