Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚೆನ್ನೈ: ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ; ವಲಸೆ ಕಾರ್ಮಿಕನನ್ನು ಹೊಡೆದು ಕೊಂದ ಗುಂಪು!

Spread the love

ಚೆನ್ನೈ: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಗುಂಪೊಂದು ಥಳಿಸಿ ಹತ್ಯೆಗೈದಿರುವ ಘಟನೆ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಂತ್ರಸ್ತನನ್ನು ಪ್ರೊಸೆಸ್ಟಿತ್ ದಾಸ್ (35) ಎಂದು ಗುರುತಿಸಲಾಗಿದೆ. ಪ್ರೊಸೆಸ್ಟಿತ್ ದಾಸ್ ಅಸ್ಸಾಂನಿಂದ ಕೆಲಸ ಹುಡುಕಿಕೊಂಡು ತಿರುವಳ್ಳೂರಿಗೆ ಬಂದು ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ ಮದ್ಯದ ಅಮಲಿನಲ್ಲಿದ್ದ ದಾಸ್, ಮಹಿಳೆಯೊಬ್ಬರಲ್ಲಿ ಕುಡಿಯುವ ನೀರು ಕೇಳುವ ನೆಪದಲ್ಲಿ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಮಹಿಳೆ ಮನೆಯೊಳಗೆ ಹೋಗಿ ಬಾಗಿಲನ್ನು ಹಾಕಿಕೊಂಡಿದ್ದಾರೆ. ಈ ವೇಳೆ ದಾಸ್ ಚಾಕುವಿನಿಂದ ಮನೆ ಕಿಟಕಿಗಳಿಗೆ ಹಾನಿ ಮಾಡಲು ಪ್ರಾರಂಭಿಸಿದ್ದಾನೆ. ಭಯಗೊಂಡ ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾಳೆ. ಸಂಬಂಧಿಕರು ಮತ್ತು ಕೆಲವು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ದಾಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ದಾಸ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *