Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ!

Spread the love

ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ (Bribe) ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಚಿಕ್ಕಜಂಬೂರು (Chikkajamburu) ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripur) ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು

ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Spread the love
Share:

administrator

Leave a Reply

Your email address will not be published. Required fields are marked *